Sunday, January 19, 2025
ಸುದ್ದಿ

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ : ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾಂತ ಗೋರೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಪುತ್ತೂರಿನ ದರ್ಬೆ ಸಮೀಪದ ಹನುಮಾನ್‍ ವಾಡಿಯ ‘ಪುಷ್ಪಾಂಜಲಿ’ ನಿವಾಸಿ, ಕಾಮಾಕ್ಷಿ ಎಂಟರ್‍ಪ್ರೈಸಸ್ ಸಂಸ್ಥೆಯ ಮಾಲಕ ಆನಂದ ಭಟ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯದರ್ಶಿಯಾಗಿ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಹೆತ್ತವರು ಹಾಗೂ ಬೋಧಕ, ಬೋಧಕೇತರ ವೃಂದ ಹಾಜರಿದ್ದರು.