Thursday, January 23, 2025
ಸುದ್ದಿ

ಬೆಳಗಾವಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಜತೆ ಶಿಕ್ಷಕನ ಪ್ರೇಮದಾಟ : ಖಾಸಗಿ ವಿಡಿಯೋ ವೈರಲ್​ –ಕಹಳೆ ನ್ಯೂಸ್

ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಪೊಲೀಸ್​ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕರೊಬ್ಬರು 9ನೇ ತರಗತಿ ವಿದ್ಯಾರ್ಥಿನಿಯನ್ನ ಪ್ರೀತಿ-ಪ್ರೇಮದ ಬಲೆಗೆ ಬೀಳಿಸಿಕೊಂಡು ಖಾಸಗಿಯಾಗಿ ಕಾಲ ಕಳೆದಿದ್ದು, ಇಬ್ಬರೂ ಒಟ್ಟಿಗಿರುವ ಖಾಸಗಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ.

ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಬೇರೆ ಕಡೆಗೆ ಕರೆದುಕೊಂಡು ಹೋಗಿದ್ದ. ಆ ವೇಳೆ ಇಬ್ಬರೂ ಏಕಾಂತದಲ್ಲಿದ್ದ ಕ್ಷಣಗಳನ್ನು ತನ್ನ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.

ವಾರದ ಹಿಂದೆಯೇ ಶಾಲಾ ಆಡಳಿತ ಮಂಡಳಿಗೆ ಈ ಪ್ರಕರಣ ಗೊತ್ತಾಗಿತ್ತು. ಆಡಳಿತ ಮಂಡಳಿ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಿದೆ. ವಿಡಿಯೋಗಳು ಎಲ್ಲೆಡೆ ಹರಿದಾಡಿದ್ದರಿಂದ ವಿದ್ಯಾರ್ಥಿನಿ ನೊಂದಿದ್ದಾಳೆ ಎಂದು ಮೂಲಗಳಿಂದ ತಿಳಿದು ಬಂದಿದೆ.