Saturday, January 25, 2025
ಸುದ್ದಿ

ಪುತ್ತೂರಿನ ಮುಂಡೂರು ಯುವತಿಗೆ ಚೂರಿ ಇರಿತ : ಯುವತಿ ಸಾವು -ಕಹಳೆ ನ್ಯೂಸ್

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಪುತ್ತೂರಿನ ಮುಂಡೂರಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.

ಚೂರಿ ಇರಿತಕ್ಕೆ ಒಳಗಾಗಿದ್ದ ಯುವತಿಯನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..