Friday, January 24, 2025
ಸುದ್ದಿ

ಟ್ರಕ್ ವೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು –ಕಹಳೆ ನ್ಯೂಸ್

ಉಡುಪಿ : ಟ್ರಕ್‌ವೊಂದನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ಹಿಂದಿನಿ0ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ನಿನ್ನೆ ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಧ್ಯಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮಂಗಳವಾರ ಸಂಜೆ 7.30 ರ ಸುಮಾರಿಗೆ ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಟ್ರಕೊಂದನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಕ್ಕಿಗೆ, ಹಿಂದಿನಿ0ದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.