Thursday, January 23, 2025
ಸುದ್ದಿ

ಶಾಂತಿವನ ಟ್ರಸ್ಟ್ ಸ್ಪರ್ಧೆಗಳಲ್ಲಿ ಜಿಲ್ಲಾಮಟ್ಟದಲ್ಲಿ ಬಹುಮಾನ ಪಡೆದುಕೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ನಿಲಿಷ್ಕ ಕಲ್ಪನೆ ಹಾಗೂ ಅಮೋಘ ಕೃಷ್ಣ – ಕಹಳೆ ನ್ಯೂಸ್

ಪುತ್ತೂರು: ಶಾಂತಿವನ ಟ್ರಸ್ಟ್ (ರಿ) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಜ್ಞಾನ ವಿಕಾಸ/ ಜ್ಞಾನ ಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ಧರ್ಮಸ್ಥಳದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಏಳನೇ ತರಗತಿಯ ನಿಲಿಷ್ಕ ಕಲ್ಪನೆ (ಶ್ರೀ ದಿನೇಶ್ ನಾಯ್ಕ್ ಕೆ ಜಿ ಮತ್ತು ಶ್ರೀಮತಿ ಸ್ಮಿತಾ ಶ್ರೀ ಬಿ ಇವರ ಪುತ್ರಿ)ಇವರು ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಅಮೋಘ ಕೃಷ್ಣ (ಶ್ರೀ ಬಾಲಕೃಷ್ಣ ಭಟ್ ಕೆ ಮತ್ತು ಶ್ರೀಮತಿ ಸುಮಿತ್ರ ಕೆ ಇವರ ಪುತ್ರ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.