Thursday, January 23, 2025
ಸುದ್ದಿ

ಜೈಲಿನಲ್ಲೇ ರೌಡಿಶೀಟರ್ ಬರ್ತ್ ಡೇ ಆಚರಣೆ ; 5 ಕೈದಿಗಳ ಮೇಲೆ ಪ್ರಕರಣ ದಾಖಲು – ಕಹಳೆ ನ್ಯೂಸ್

ರಾಮನಗರ: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೈದಿಗಳ ಮೇಲೆ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರೌಡಿಶೀಟರ್ ಕಿರಣ್ ಅಲಿಯಾಸ್ ತಮಟೆ ಎಂಬಾತನ ಬರ್ತ್ ಡೇ ಆಚರಣೆ ಮಾಡಿ ಜೈಲಿನಲ್ಲೇ ಕೇಕ್ ಕತ್ತರಿಸಲಾಗಿತ್ತು. ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದರು. ಕೇಕ್ ಕತ್ತರಿಸಿ, ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿರುವ ಎರಡು ಫೋಟೋಗಳು ವೈರಲ್ ಆಗಿತ್ತು.

ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿದೆ. ಅಲ್ಲದೇ ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಗಳೇ ಸಾಥ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಮನಗರ ಎಸ್ಪಿ ಸಂತೋಷ್ ಬಾಬು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಎರಡು ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆದು ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಕಿರಣ್ ಹಾಗೂ ಆತನ ಸಂಗಡಿಗರ ವಿರುದ್ಧ ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಹಕಾರ ನೀಡಿದ ಜೈಲು ಸಿಬ್ಬಂದಿ ವಿರುದ್ಧ ತನಿಖೆಗೆ ಸೂಚಿಸಿದ್ದಾರೆ.