Thursday, January 23, 2025
ಸುದ್ದಿ

ಮಾಣಿ: ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ : ಕಾರು ಚಾಲಕನ ಸ್ಥಿತಿ ಗಂಭೀರ –ಕಹಳೆ ನ್ಯೂಸ್

ವಿಟ್ಲ: ಮಾಣಿ ಸಮೀಪದ ಸೂರಿಕುಮೇರ್ ಜಂಕ್ಷನ್‌ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿಗೆ ತೆರಳುತ್ತಿದ್ದ ಬುಲೆಟ್ ಟ್ಯಾಂಕರ್ ಹಾಗೂ ಮಾಣಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.