Breaking News : ಭಾರತ ಕಂಡ ಧೀಮಂತ ನಾಯಕ, ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ – ಕಹಳೆ ನ್ಯೂಸ್
ನವದೆಹಲಿ: ಭಾರತ ಕಂಡ ಧೀಮಂತ ನಾಯಕ, ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಖ್ಯಾತರಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಮೂತ್ರಪಿಂಡದ ಸೋಂಕು, ಎದೆ ನೋವಿನಿಂದ ಬಳಲುತ್ತಿದ್ದ ವಾಜಪೇಯಿ ಜೂನ್ 11 ರಂದು ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಅವರು ಮಧುಮೇಹದಿಂದಲೂ ಬಳಲುತ್ತಿದ್ದರು.
ಬುಧವಾರ ವಾಜಪೇಯಿ ಆರೋಗ್ಯದ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಏಮ್ಸ್, ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಮುಂದಿನ 24 ಗಂಟೆ ಏನು ಹೇಳಲು ಸಾಧ್ಯವಿಲ್ಲ ಎಂದು ಹೇಳಿತ್ತು. ವೆಂಟಿಲೆಟರ್ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು.
ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದ ವಿವರ ಪಡೆದುಕೊಂಡಿದ್ದರು.