Monday, November 25, 2024
ಸಂತಾಪಸುದ್ದಿ

ಮಂಗಳೂರಿನ ಖ್ಯಾತ ವೈದ್ಯ ಕೆ. ಜಯರಾಮ್‌ ಶೆಟ್ಟಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಮಂಗಳೂರು: (Doctor K. jayaram shetty) ಮಂಗಳೂರು ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್.ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆಯ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ಕ್ಯಾನ್ಸರ್‌ ವಿಭಾಗದ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುಪುರ ಪರಾರಿ ದೋಟ ಕೊಳಕ್ಕೆಬೈಲು ನಿವಾಸಿ ಡಾ. ಜಯರಾಮ್‌ ಶೆಟ್ಟಿ ( 53 ವರ್ಷ) ನಿಧನರಾಗಿದ್ದಾರೆ.

ಡಾ. ಜಯರಾಮ್‌ ಶೆಟ್ಟಿ ಮಂಗಳೂರಿನ ಕೆ.ಎಂ.ಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕ್ಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ರೇಡಿಯೇಶನ್‌ ಆಂಕಾಲಜಿ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಒಂದು ದಶಕಗಳಿಗಿಂತ ಹೆಚ್ಚು ಸಮಯ ಸೇವೆ ಸಲ್ಲಿಸಿ ಕಳೆದ ಹನ್ನೊಂದು ವರ್ಷಗಳಿಂದ ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್.‌ ಹೆಗ್ಡೆ ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಎಂದಿನಂತೆ ಅಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿ ಮನೆಗೆ ತೆರಳಿದ್ದ ಇವರು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ತೆರಳುತ್ತಿದ್ದಾಗ ಹಠಾತ್‌ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಅನೇಕ ಬಡ ರೋಗಿಗಳ ಚಿಕಿತ್ಸೆಗೆ ಸಹಾಯಹಸ್ತ ನೀಡುತ್ತಿದ್ದರು.