Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಎನ್‌ಐಎಯಿಂದ 1,500 ಚಾರ್ಜ್ ಶೀಟ್ ಸಲ್ಲಿಕೆ, 240 ಸಾಕ್ಷಿಗಳ ಹೇಳಿಕೆ, 20 ಆರೋಪಿಗಳ ಹೆಸರು ಉಲ್ಲೇಖ – ಕಹಳೆ ನ್ಯೂಸ್

ಬೆಂಗಳೂರು, ಜ 21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು