Sunday, January 19, 2025
ಕಾಸರಗೋಡುಕ್ರೈಮ್ಸುದ್ದಿ

ನಾಪತ್ತೆಯಾಗಿದ್ದ ಹಿಂದೂ ಮಹಿಳೆ ಸಿಂಧು ಮತ್ತು ಮುಸ್ಲಿಂ ಪುರುಷ ಕೆ.ಎಂ. ಮಹಮ್ಮದ್ ಶರೀಫ್ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಸರಗೋಡು, ಜ 21 : ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.