ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದ ಕಾಂಗ್ರೆಸ್‌ನಿ0ದ ಪ್ರಜಾ ಧ್ವನಿಯಾತ್ರೆ ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್ –ಕಹಳೆ ನ್ಯೂಸ್
ಸ್ವಾತಂತ್ರ‍್ಯಾನAತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ದುರಾಡಳಿತ ನಡೆಸಿದ್ದ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆಯಿಂದ ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದು, ಇದೀಗ ಪ್ರಜಾ ಧ್ವನಿ ಯಾತ್ರೆಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಅವರು ಕುಂದಾಪುರ ಮಂಡಲದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 164ರಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಜೊತೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಮಾತಾನಾಡಿ ‘ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ; ಭ್ರಷ್ಟಾಚಾರ ಅಂದರೆ ಕಾಂಗ್ರೆಸ್’ ಎಂಬುದು ಜಗಜ್ಜಾಹೀರಾಗಿದೆ. ಇದಕ್ಕೊಂದು ಜ್ವಲಂತ ಉದಾಹರಣೆ ಎಂದರೆ ಗೂಗಲ್ ಸರ್ಚ್ ನಲ್ಲಿ ‘ಕಾಂಗ್ರೆಸ್ ಲೂಟೆಡ್ ಇಂಡಿಯಾ ಫಾರ್ 70 ಇಯರ್ಸ್’ ಎಂದು ಹುಡುಕಿದರೆ ಕಾಂಗ್ರೆಸ್ ಕಳೆದ 70 ವರ್ಷಗಳಿಂದ ದೇಶವನ್ನು ಲೂಟಿ ಮಾಡಿರುವ ಮೊತ್ತ ರೂ.48,20,69,00,00,000 ಎಂಬ ಉತ್ತರ ಬರುತ್ತದೆ. ಇದರಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಹೆಸರಿನ ಜೊತೆಗೆ ಪ್ರಸ್ತುತ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ತನಿಖೆ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್ ಹಗರಣ ಕೂಡ ಸೇರಿರುವುದು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕೂಪದ ವಿರಾಟ್ ಸ್ವರೂಪವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ ಎಂದರು.
ಒAದೆಡೆ ಹಲವಾರು ಪ್ರಕರಣಗಳಲ್ಲಿ ಸ್ವಯಂ ತನಿಖೆಗೆ ಹೆದರಿ ಲೋಕಾಯುಕ್ತಕ್ಕೇ ಎಳ್ಳು ನೀರು ಬಿಟ್ಟ ಮಾಜಿ ಸಿ.ಎಂ. ಸಿದ್ಧರಾಮಯ್ಯ; ಇನ್ನೊಂದೆಡೆ ಭ್ರಷ್ಟಾಚಾರದ ಹಗರಣಗಳ ಸರಮಾಲೆಯೊಂದಿಗೆ ಪದೇ ಪದೇ ತನಿಖೆ ಎದುರಿಸುತ್ತಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಇವರ ನಡುವಿನ ಮುಸುಕಿನ ಗುದ್ದಾಟ ಪ್ರಸ್ತುತ ಬಟ್ಟಾಬಯಲಾಗಿದೆ. ಇದೀಗ ಚುನಾವಣಾ ಸಂದರ್ಭದಲ್ಲಿ ಯಾವುದೇ ಹಣದ ಮೂಲದ ವಿವರವನ್ನು ನೀಡದೇ ಉಚಿತ ಭಾಗ್ಯಗಳನ್ನು ಘೋಷಿಸುತ್ತಾ ರಾಜ್ಯದ ಜನತೆಗೆ ಮಂಕು ಬೂದಿ ಎರಚಲು ಹವಣಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ನ ಮೋಸ ಜಾಲದ ಹಿಡನ್ ಅಜೆಂಡಾವನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತಿದ್ದಾರೆ. ಒಂದೇ ವರ್ಗವನ್ನು ಓಲೈಸುವ ಜೊತೆಗೆ ಪ್ರಚಾರಕ್ಕಾಗಿ ಬಿಟ್ಟಿ ಭಾಗ್ಯಗಳನ್ನು ನೀಡುತ್ತಾ ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಸಾಲ ಮಾಡಿದ ಕುಖ್ಯಾತಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕರಾಳ ಇತಿಹಾಸವನ್ನು ರಾಜ್ಯದ ಜನತೆ ಮರೆತಿಲ್ಲ. ಜನತೆ ಜಾಗೃತರಾಗಿದ್ದು, ಗೊತ್ತು ಗುರಿ ಇಲ್ಲದ ಉಚಿತ ಭಾಗ್ಯಗಳನ್ನು ಘೋಷಿಸಿ ರಾಜ್ಯವನ್ನು ದಿವಾಳಿತನದ ಅಂಚಿಗೆ ನೂಕುವ ಕಾಂಗ್ರೆಸ್ ಪ್ರಯತ್ನ ಎಂದಿಗೂ ಸಫಲವಾಗದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ವಿಠ್ಠಲ ಪೂಜಾರಿ, ಅಭಿಯಾನದ ಜಿಲ್ಲಾ ಸಂಚಾಲಕ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಸಹವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಅಭಿಯಾನದ ಮಂಡಲ ಸಂಚಾಲಕರಾದ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಸುರೇಂದ್ರ ಕಾಂಚನ್ ಸಂಗಮ್, ಅರುಣ್ ಬಾಣ, ಸತೀಶ್ ಬಾರಿಕೆರಿ, ವಿದ್ಯಾ ಸಾಲಿಯನ್, ರೂಪಾ ಪೈ, ಜ್ಯೋತಿ ಪೂಜಾರಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.