ಗಣರಾಜೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್
ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ || ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.