Monday, January 20, 2025
ಸುದ್ದಿ

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಲ್ಲಡ್ಕ ಶಾಖೆಯ ಬ್ಯಾಂಕ್ ಆಫ್ ಬರೋಡಾದ ಪ್ರಬಂಧಕರಾದ ಶ್ರೀ ಸದಾಶಿವ ಅವರು ಧ್ವಜಾರೋಹಣಗೈದು ಮಾತನಾಡಿ ಭಾರತವು ವಿಶ್ವಗುರುವಾಗುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದೆ. ಪ್ರತಿಯೊಬ್ಬರೂ ದೇಶದ ಚಿಂತನೆಯಲ್ಲಿ ತೊಡಗಿಕೊಂಡರೆ ಮಾತ್ರ ಇದು ಅತಿ ಶೀಘ್ರದಲ್ಲಿ ನೆರವೇರಲು ಸಾಧ್ಯ ಎಂದು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಸ್ವತಂತ್ರ ಭಾರತದಲ್ಲಿ ಸಂವಿಧಾನದ ಮಹತ್ವವನ್ನು ತಿಳಿಸುವ ಜೊತೆಗೆ ಭಾರತವು ಅತಿ ಹೆಚ್ಚು ತರುಣರನ್ನು ಹೊಂದಿರುವ ದೇಶ, ದೇಶದ ಅಭಿವೃದ್ಧಿಗಾಗಿ ಎಲ್ಲರೂ ಕೂಡ ತಮ್ಮ ಅಂತಶ್ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪಣ ತೊಡುವ ದಿನ ಇದಾಗಬೇಕು ಎಂದು ಹೇಳಿದರು.

ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಸ್ವಾಗತಿಸಿ, ನಿರೂಪಿಸಿ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.