ರಸ್ತೆ, ಆಸ್ಪತ್ರೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ತೀರ್ಮಾನ : ಸಿಎಂ ಬೊಮ್ಮಾಯಿ ಘೋಷಣೆ –ಕಹಳೆ ನ್ಯೂಸ್
ಬೆಂಗಳೂರು : ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಬ್ರಿಟಿಷರ ಕಾಲದಲ್ಲಿ ಬ್ರಿಟಿಷ್ ಖ್ಯಾತನಾಮರ ಹೆಸರುಗಳನ್ನು ಬೆಂಗಳೂರಿನ ರಸ್ತೆ, ಆಸ್ಪತ್ರೆಗಳಿಗೆ ಇಡಲಾಗಿತ್ತು. ಈ ವಿಚಾರವನ್ನು ಸಂಸದ ಪಿ.ಸಿ.ಮೋಹನ್ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಎಂದು ಕಡ್ಡಾಯವಾಗಿ ಇಂದಿನಿಂದಲೇ ಆದೇಶ ಮಾಡುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ ಎಂದರು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಸರ್ಕಾರ ಸ್ಥಾಪಿಸುವ ಉದ್ದೇಶ ಹೊಂದಿದೆ.. ರಕ್ಷಣಾ ಇಲಾಖೆ ಆ ಶಾಲೆಯ ಉಸ್ತುವಾರಿ ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಆ ಯೋಜನೆಗಾಗಿ ಈಗಾಗಲೇ ಸರ್ಕಾರ 55 ಕೋಟಿ ರು. ಬಿಡುಗಡೆ ಮಾಡಿದೆ ಎಂದರು.