ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರ್ ನಲ್ಲಿ ನಡೆದ ವಿಜಯ ಸಂಕಲ್ಪ ಅಭಿಯಾನದಲ್ಲಿ ಶಾಸಕ ರಘುಪತಿ ಭಟ್ ಭಾಗಿ – ಕಹಳೆ ನ್ಯೂಸ್
ಜಿಲ್ಲೆಯಾದ್ಯಂತ ಜನವರಿ 21 ರಿಂದ ಜನವರಿ 29 ರವರೆಗೆ “ವಿಜಯ ಸಂಕಲ್ಪ ಅಭಿಯಾನ” ನಡೆಯುತ್ತಿದ್ದು, ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರ್ ನಲ್ಲಿ ನಡೆದ “ವಿಜಯ ಸಂಕಲ್ಪ ಅಭಿಯಾನ” ದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಳೆ 2018 ರಿಂದ ಈ ವರೆಗೆ ಶಾಸಕ ರಘುಪತಿ ಭಟ್ ಅವರು ಮಂಜೂರುಗೊಳಿಸಿದ ಅನುದಾನದ ಸಮಗ್ರ ವಿವರದ ಸಾಧನೆಯ ಕಿರುಹೊತ್ತಿಗೆಯನ್ನು ಬೂತ್ ಅಧ್ಯಕ್ಷರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ನಗರ ಬಿಜೆಪಿ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ಹಾಗೂ ಅಂಬಲಪಾಡಿ ಗ್ರಾಮ ಸದಸ್ಯರು, ಬೂತ್ ಅಧ್ಯಕ್ಷರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.