ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್.ಐ.ಎ. ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
ಈ ಮಧ್ಯೆ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಘೋಷಿಸಿದ್ದರು.
ಇದೀಗ ಇಬ್ಬರೂ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದ್ದು ವಿಚಾರಣೆಗಾಗಿ ಭಾರತಕ್ಕೆ ಕರೆತರುವ ಕಾರ್ಯಾಚರಣೆ ನಡೆಯುತ್ತಿದೆ.