ಮಂಗಳೂರು ಮಂಗಳೂರು ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬAಧಿಸಿ, ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
‘ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಡ್ರಗ್ಸ್ ಮಾಫಿಯಾದ ಹಿಂದೆ ಬಿದ್ದಿದ್ದ ಮಂಗಳೂರು ಪೊಲೀಸರು ಕಳೆದ ಜನವರಿ 11 ರಂದು ಹೈ ಪ್ರೋಪೈಲ್ ಡ್ರಗ್ಸ್ ಜಾಲವನ್ನು ಭೇದಿಸಿದ್ದರು. ಈ ವೇಳೆ ಇಬ್ಬರು ವೈದ್ಯರು ಸೇರಿ ಹತ್ತಾರು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಇವರೆಲ್ಲ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನವರಾಗಿದ್ದು ಎಲ್ಲರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಇದಾದ ನಂತರ ನಿನ್ನೆ ಈ ಜಾಲದಲ್ಲಿದ್ದ ಕೆಎಂಸಿ ಮೆಡಿಕಲ್ ಕಾಲೇಜಿನ ಇಬ್ಬರು ವೈದ್ಯರುಗಳಿಗೆ ಆಸ್ಪತ್ರೆಯ ಆಡಳಿತ ಮಂಡಳಿ ಗೇಟ್‌ಪಾಸ್ ನೀಡಿತ್ತು. ಅವರ ಗುತ್ತಿಗೆಯನ್ನು ರದ್ದುಪಡಿಸಿ ಅವರನ್ನು ಟರ್ಮಿನೇಟ್ ಮಾಡಲಾಗಿದೆ. ಜೊತೆಗೆ ಇದೇ ಕೆಎಂಸಿ ಕಾಲೇಜಿನ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ಕಾಲೇಜಿನ ಆಡಳಿತ ಮಂಡಳಿ ಈ ಕ್ರಮಕೈಗೊಂಡು ಪೊಲೀಸ್ ಕಮಿಷನರ್ ಕಚೇರಿಗೆ ದೌಡಾಯಿಸಿ ಈ ಶಿಸ್ತುಕ್ರಮದ ಬಗ್ಗೆ ಮಾಹಿತಿ ನೀಡಿದ್ದರು. ಸ್ವತಃ ಕೆಎಂಸಿ ವೈದ್ಯಕೀಯ ಕಾಲೇಜಿನ ಡೀನ್ ಉನ್ನಿಕೃಷ್ಣನ್ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಕಮಿಷನರ್ ಶಶಿಕುಮಾರ್ ಅವರಿಗೆ ಮಾಹಿತಿ ನೀಡಿದ್ರು. ಇಂತಹ ಮಾದಕ ಜಾಲದಲ್ಲಿ ಭಾಗಿಯಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು. ಪಾರದರ್ಶಕ ತನಿಖೆಗೆಗಾಗಿ ಅವರನ್ನು ಕಾಲೇಜಿನಿಂದ ಕಳಿಸಲಾಗಿದೆ. ತನಿಖೆಗೆ ಬೇಕಾದ ಎಲ್ಲಾ ಸಹಕಾರವನ್ನು ಕೆಎಂಸಿ ಆಸ್ಪತ್ರೆಯ ಕಡೆಯಿಂದ ನೀಡಲಾಗುವುದು ಎಂದು ಡೀನ್ ಸ್ಪಷ್ಟಪಡಿಸಿದ್ದರು.
ಇದೀಗ ಡ್ರಗ್ಸ್ ಪ್ರಕರಣಕ್ಕೆ ಸಂಬAಧಿಸಿ, ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.