Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಂಬಳದಲ್ಲಿ ಎರಡೆರಡು ಅಹಿತಕರ ಘಟನೆ – ಕಂಬಳ ನೋಡಲು ಬಂದ ಹಿಂದೂ ಯುವತಿಯರ ಫೋಟೋ ತೆಗೆಯುತ್ತಿದ್ದ ಮುಸ್ಲಿಂ ಮತಾಂಧನನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಗಳು ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪವಿತ್ರ ಸ್ಥಳದಲ್ಲಿ ಅಪಚಾರ ನಡೆಯುತ್ತಿದ್ದರೂ ಯಾಕೆ ಕಣ್ಣುಮುಚ್ಚಿ ಕುಳಿತ್ತಿದ್ದಾರೆ ಪುತ್ತೂರಿನ ಹಿಂದೂಗಳು..!? – ಕಹಳೆ ನ್ಯೂಸ್

ಪುತ್ತೂರು : ಕಂಬಳ ಗದ್ದೆಯಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಫೋಟೋ ತೆಗೆದ ಘಟನೆ ನಡೆದಿದ್ದು, ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅನ್ಯಮತೀಯ ಯುವಕನನ್ನು ಕುರಿಯ ಮೂಲದವ ಎನ್ನಲಾಗಿದೆ.

ಕಂಬಳ ನೋಡಲು ಬಂದ ಹಿಂದೂ ಯುವತಿಯೋರ್ವಳ ಫೋಟೋ ಅನ್ಯಕೋಮಿನ ಯುವಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಠಾಣೆಗೆ ಕರೆದೊಯ್ದಿದ್ದು, ಠಾಣೆಯಲ್ಲಿ ಯುವಕನ ಮೊಬೈಲ್ ಪರಿಶೀಲನೆ ನಡೆಸಿದಾಗ ಇನ್ನು ಹಲವು ಯುವತಿಯರ ಫೋಟೋಗಳನ್ನು ಮೊಬೈಲ್ ನಲ್ಲಿ ಇರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ, ಯುವಕನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಠಾಣೆಯಿಂದ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಇಂತಹ ಘಟನೆಗಳಿಗೆ ನಡೆಯುವ ಸಂಭವವಿದೆ ಎಂದು ಈ ಮೊದಲೇ ಹಿಂದೂ ಜಾಗರಣ ವೇದಿಕೆ ಆಯೋಜಕರಲ್ಲಿ ಮತ್ತು ವ್ಯವಸ್ಥಾಪನ ಸಮಿತಿಯವರಲ್ಲಿ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದು, ಈಗ ಈ ರೀತಿ ಘಟನೆಗಳು ನಡೆದಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.