Sunday, November 24, 2024
ಸುದ್ದಿ

ರಾಜ್ಯಮಟ್ಟದಲ್ಲಿ ಹೆಚ್ಚಿದ ಗ್ರಾಮ ಪಂಚಾಯತ್ ನೌಕರರ ಹೋರಾಟದ ಕಾವು ; ಮಾನ್ಯ ಮುಖ್ಯಮಂತ್ರಿಗಳಿ0ದ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ನಿರ್ದೇಶನ –ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ರಾಜ್ಯ ಸಮಿತಿ ಬೆಂಗಳೂರು ಇದರ ಮುಖೇನಾ ಡಿ.19 ರಂದು ಬೆಳಗಾವಿಯ ಕೊಂಡಾಸ್ ಕೊಪ್ಪ ಬಯಲು ಮೈದಾನದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗವಹಿಸಿ ರಾಜ್ಯಮಟ್ಟದ ಬೃಹತ್ ಹೋರಾಟವನ್ನು ಕೈಗೊಳ್ಳಲಾಗಿತ್ತು, ಈ ಹೋರಾಟದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಚಿವರಾದ ಗೋವಿಂದ ಕಾರಜೋಳ ಇವರು ಪ್ರತಿಭಟನೆ ಸ್ಥಳಕ್ಕೆ ಬಂದು ಸರಕಾರದ ಪರವಾಗಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆಯನ್ನು ನೀಡಿದ್ದರು. ಈ ಬಗ್ಗೆ ಹಲವಾರು ಬಾರಿ ವಿಧಾನಸಭೆ ವಿಧಾನ ಪರಿಷತ್ತಿನಲ್ಲಿ ನೌಕರರ ಸಮಸ್ಯೆಗಳ ಕುರಿತು ಪ್ರಸ್ತಾಪ ಕೂಡ ಆಯಿತು, ಆದರೆ ಈ ಹೋರಾಟದಲ್ಲಿ ಸಲ್ಲಿಸಿದ ಮನವಿಗಳ ಕುರಿತು ಇಲಾಖೆ ಯಾವುದೇ ಪ್ರತಿಕ್ರಿಯೆ ಕೈಗೊಳ್ಳಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆ ಫೆ.06. ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ಎಲ್ಲಾ ನೌಕರರನ್ನು ಒಟ್ಟುಗೂಡಿಸಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ಮಾಡುವುದಾಗಿ ನಿರ್ಧಾರ ಕೈಗೊಂಡಿದೆ. ಗ್ರಾಮ ಪಂಚಾಯಿತಿ ನೌಕರರ ಮೂಲಭೂತ ಬೇಡಿಕೆಗಳನ್ನು ನಿಯಮಾನುಸಾರ ಪರಿಶೀಲಿಸಿ ಈಡೇರಿಸುವಂತೆ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿಯವರು ಜ. 24 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸರಕಾರದ ಪರವಾಗಿ ಟಿಪ್ಪಣಿ ಸಲ್ಲಿಸಲಾಗಿತ್ತು.

ಈ ಕೂಡಲೇ ನೌಕರರ ಸಮಸ್ಯೆಗಳ ಕುರಿತು ಸಂಘಟಕರೊAದಿಗೆ ಸಮಾಲೋಚನೆ ಮಾಡಿ ಪರಿಹಾರ ಕೈಗೊಳ್ಳಲು ಒತ್ತಾಯಿಸಿದ್ದಾರೆ ಹಾಗೂ ಫೆ. 6 ರಂದು ಫ್ರೀಡಂ ಪಾರ್ಕ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಹೋರಾಟದಲ್ಲಿ ಭಾಗವಹಿಸಿ ಕಳೆದ ಮೂರು ದಶಕಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಿದ್ದರಾಗಿದ್ದಾರೆ.