Recent Posts

Monday, January 20, 2025
ಸುದ್ದಿ

ಬಸ್ ಮತ್ತು ಕಾರು ನಡುವೆ ಅಪಘಾತ; ಓರ್ವ ಸಾವು –ಕಹಳೆ ನ್ಯೂಸ್

ಬಸ್ ಮತ್ತು ಕಾರು ನಡುವೆ ಅಪಘಾತ ಉಂಟಾಗಿ ಓರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಪೆರಿಯದಲ್ಲಿ ನಡೆದಿದೆ. ಪೆರಿಯ ನಡುವೆಟ್ಟ ಪಾರೆಯ ವೈಶಾಕ್ (30) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಂಬAಧಿಕರಾದ ಆರತಿ (26) ಎಂಬವರು ಗಂಭೀರ ಗಾಯಗಳಾಗಿದ್ದು, ಇವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ತಲಪಿಸಿದರೂ ವೈಶಾಖ್ ಆಗಲೇ ಮೃತಪಟ್ಟಿದ್ದರು. ಕಾಸರಗೋಡು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ ಎನ್ನಲಾಗಿದೆ.

ವೈಶಾಖ್ ಇಂಟರ್ ಲಾಕ್ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಾಳೆ. ಢಿಕ್ಕಿಯ ರಭಸಕ್ಕೆ ಬಸ್ ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.