ಮಂಗಳೂರು ಪಡಿ ಸಂಸ್ಥೆ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಗಳ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಣ ಹಕ್ಕು ಕಾಯ್ದೆ 2006ರ ಕುರಿತು ಸಮಾಲೋಚನಾ ಸಭೆ ಉಡುಪಿ ತಾಪಂ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ತಾಲೂಕು ಪಂಟಾಯತ್ ಕಾರ್ಯ ನಿರ್ವಹಣಾಧಿಕಾರಿ ವಿಜಯ ಅವರು ಉದ್ಘಾಟಿಸಿದ್ರು. ಬಳಿಕ ಮಾತನಾಡಿ, ಶಿಕ್ಷಣ ಹಕ್ಕು ಕಾಯಿದೆಯು ಗ್ರಾಮೀಣ ಪ್ರದೇಶ ಜನಪ್ರತಿನಿಧಿ, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ತಲುಪಬೇಕಾಗಿದೆ ಎಂದ್ರು.
ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣದ ಹಕ್ಕು ಬದುಕುವ ಹಕ್ಕಿನಂತೆ ಪ್ರತಿ ಯೊಬ್ಬರ ಮೂಲಭೂತ ಹಕ್ಕು ಆಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತ ರಾದರೆ ಅವರಿಗೆ ಶಿಕ್ಷಣ ಸಿಗುವಂತೆ ಮಾಡುವುದು ಸರಕಾರದ ಜವಾಬ್ದಾರಿ ಯಾಗಿದೆ ಎಂದರು. ಜಿಲ್ಲಾಧ್ಯಕ್ಷ ದಿವಾಕರ್ ಕುಮಾರ್ ಉಪಸ್ಥಿತರಿದ್ದರು.