ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ಟ್ರಾನ್ಸ್ಜೆಂಡರ್ ದಂಪತಿ ಸಿಯಾ ಮತ್ತು ಸಹದ್ ಇದೀಗ ತಂದೆ ತಾಯಿಯಾಗುವ ಸಂಭ್ರಮದಲ್ಲಿದ್ದಾರೆ. ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಈ ಸುಂದರಕ್ಷಣಕ್ಕೆ ಕಾಯುತ್ತಿದ್ದಾರೆ. ಸಹದ್ ಗರ್ಭಧಾರಣೆಯ ಮೂಲಕ ಭಾರತದ ಮೊದಲ ಟ್ರಾನ್ಸ್ಮ್ಯಾನ್ ತಂದೆಯಾಗುತ್ತಿದ್ದಾರೆ.
ಸಿಯಾ ಒಬ್ಬ ನರ್ತಕಿಯಾಗಿದ್ದು, ಸಹದ್ ಖಾಸಗಿ ಸಂಸ್ಥೆಯೊ0ದರಲ್ಲಿ ಅಕೌಂಟೆ0ಟ್ ಆಗಿದ್ದಾರೆ. ಈ ದಂಪತಿಗಳು ಮಗುವನ್ನು ದತ್ತು ಪಡೆಯಲು ಪ್ರಯತ್ನಿಸಿದ್ದರು. ಆದ್ರೆ ಇದಕ್ಕೆ ಟ್ರಾನ್ಸ್ಜೆಂಡರ್ ದಂಪತಿಗೆ ಕಾನೂನು ಪ್ರಕ್ರಿಯೆಯ ಸವಾಲಾಗಿತ್ತು. ಆಗ ಸಹದ್‌ಗೆ ಗಂಡಾಗಿದ್ದರೂ ಗರ್ಭಿಣಿಯಾಗುವ ಯೋಚನೆ ಬರುತ್ತದೆ. ಜನರು ಏನು ಹೇಳುತ್ತಾರೋ ಎಂಬ ಆತಂಕದಲ್ಲಿ ಆರಂಭದಲ್ಲಿ ಹಿಂಜರಿಯುತ್ತಿದ್ದೆ. ಅಲ್ಲದೆ ಒಮ್ಮೆ ಕೈಬಿಟ್ಟ ಸ್ತ್ರೀತ್ವಕ್ಕೆ ಮರಳುವುದು ಒಂದು ಸವಾಲಾಗಿ ಪರಿಣಮಿಸಿತು. ಆದರೆ ಸಿಯಾಳ ಪ್ರೀತಿ ಮತ್ತು ತಾಯಿಯಾಗಬೇಕೆಂಬ ಅದಮ್ಯ ಬಯಕೆ ಸಹದ್ ನಿರ್ಧಾರವನ್ನೇ ಬದಲಿಸಿತು. ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿನ ವೈದ್ಯರ ಮಾರ್ಗದರ್ಶನದಲ್ಲಿ ತಜ್ಞ ಪರೀಕ್ಷೆಗಳನ್ನು ನಡೆಸಿ ಆರೋಗ್ಯ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರ ಚಿಕಿತ್ಸೆ ಆರಂಭಿಸಲಾಯಿತು.
ಸಹದ್ ಹೆಣ್ಣಿನಿಂದ ಗಂಡಾಗಿ ಪರಿವರ್ತನೆಯ ಭಾಗವಾಗಿ, ಸ್ತನಗಳನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲಾಯಿತು. ಆದರೆ ಗರ್ಭಾಶಯ ಇತ್ಯಾದಿಗಳನ್ನು ಬದಲಾಯಿಸಲಾಗಿಲ್ಲ. ಇವರಿಗೆ ಮಾರ್ಚ್ ೪ಕ್ಕೆ ಗಡುವು ನೀಡಲಾಗಿದೆ. ಇನ್ನು ಹಾಲಿನ ಬ್ಯಾಂಕ್ ಮೂಲಕ ಮಗುವಿಗೆ ಹಾಲುಣಿಸಲು ನಿರ್ಧರಿಸಲಾಗಿದೆ. ಇದೀಗ ಈ ದಂಪತಿಗಳು ಫೋಟೋ ಶೂಟ್ ಮಾಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗುತ್ತಿದೆ.