Recent Posts

Monday, January 27, 2025
ಸುದ್ದಿ

ಇನ್‌ಸ್ಟಾಗ್ರಾಮ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ..! ಯುವತಿಯರನ್ನು ಟಾರ್ಗೆಟ್ ಮಾಡಿ ಕಾಡುತ್ತಿದ್ದವ ಅಂದರ್….- ಕಹಳೆ ನ್ಯೂಸ್

ಇನ್‌ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ನಗ್ನ ಚಿತ್ರ ಪಡೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್‌ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳನ್ನು ಪಡೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ದಿಲ್ಲಿ ಪ್ರಸಾದ್ (26) ಬಂಧಿತ ಆರೋಪಿಯಾಗಿದ್ದಾನೆ. ಈತ ಆಂಧ್ರ ಮೂಲದವನಾಗಿದ್ದು, 2018 ರಿಂದ ಬೆಂಗಳೂರಿನಲ್ಲಿ ವಾಸವಿದ್ದನು. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈತ ಮೊನಿಯ ಮತ್ತು ಮ್ಯಾನೇಜರ್ ಎಂಬ ಎರಡು ನಕಲಿ ಖಾತೆ ಸೃಷ್ಟಿ ಮಾಡಿದ್ದಾನೆ.

ಈ ಖಾತೆಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಯುವತಿಯರೊಂದಿಗೆ ಸಲುಗೆಯಿಂದ ವರ್ತಿಸಿ, ನಂಬಿಕಸ್ತ ಎಂದು ಭರವಸೆ ಮೂಡಿಸುತ್ತಿದ್ದನು. ಬಳಿಕ ಅವರಿಗೆ ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳನ್ನು ಪಡೆದು ಕೊಳ್ಳುತಿದ್ದನು. ಬಳಿಕ ಫೋಟೋಗಳನ್ನು ಬಳಸಿ ಬೆದರಿಸಿ ಬೇರೊಬ್ಬರ ಜೊತೆ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಯ ಮಾಡುತ್ತಿದ್ದನು.

ಈತ ಹೇಳಿದ ವ್ಯಕ್ತಿಗೆ ಭೇಟಿಯಾಗುವಂತೆ ಯುವತಿಯರಿಗೆ ಹೇಳುತ್ತಿದ್ದನು. ಇದರಂತೆ ಓರ್ವ ಯುವತಿ ಬ್ಯ್ಲಾಕ್‌ಮೇಲ್‌ಗೆ ಒಳಗಾಗಿ ಮಡಿವಾಳದ ಓಯೋ ರೂಂನಲ್ಲಿ ಲೈಂಗಿಕ ಕ್ರಿಯೆ ವೇಳೆ ವಿಡಿಯೋ ದೃಶ್ಯವಳಿಗಳನ್ನು ಸೆರೆ ಹಿಡಿದುಕೊಂಡಿದ್ದನು. ವಿಷಯ ತಿಳಿಯುತ್ತಿದ್ದಂತೆ ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ವೇಳೆ ಈತನÀ ಮತ್ತಷ್ಟು ಕೃತ್ಯ ಬೆಳಕಿಗೆ ಬಂದಿದೆ.

ತನಿಖೆ ವೇಳೆ ಮೂರು ಯುವತಿಯ ಜೊತೆ ಈ ರೀತಿ ಕೃತ್ಯ ನಡೆದಿದ್ದಾಗಿ ಹೇಳಿದ್ದಾನೆ. ಜೊತೆಗೆ 10ಕ್ಕೂ ಅಧಿಕ ಮಹಿಳೆಯರ ಫೋಟೊಗಳ ಹೊಂದಿರೊದು ಪತ್ತೆಯಾಗಿದ್ದು, ಯುವತಿಯರಿಗೆ ಬ್ಯ್ಲಾಕ್ ಮೇಲ್ ಮಾಡಿ ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದನು. ಅಲ್ಲದೆ ಕೆಲವರಿಂದ ಹಣ ಪಡೆಯುತ್ತಿದ್ದನು. ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ, ನಂಬಿಸಿ ಮೋಸ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಈ ಜಾಲಕ್ಕೆ ಹೆಚ್ಚಾಗಿ ಯುವತಿಯರೇ ಬೀಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಈ ಹಿನ್ನೆಲೆ ಮಹಿಳೆಯರು ಸಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದ ಇರಬೇಕೆಂದು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.