Thursday, January 23, 2025
ಸುದ್ದಿ

ಕಾಂಗ್ರೇಸ್ ಪಕ್ಷ ಸೇರ್ತಾರ ಕಿಚ್ಚ ಸುದೀಪ್..? : ಡಿಕೆ ಶಿವಕುಮಾರ್ ಸ್ಪಷ್ಟನೆ-ಕಹಳೆ ನ್ಯೂಸ್

ರಾಜ್ಯ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ಇದೀಗ ಮಹತ್ವದ ಬೆಳಗವಣಿಗೆ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಸುದೀಪ್ ಕೈ ಪಡೆ ಸೇರ್ತಾರ ಅನ್ನೋ ಮಾತುಗಳು ಭಾರಿ ಚರ್ಚೆಯಲ್ಲಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ರೆ ಸುದೀಪ್‌ರನ್ನು ಭೇಟಿ ಮಾಡಿರುವ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಇಂದು ಸ್ಪಷ್ಟನೆ ನೀಡಿದ್ದಾರೆ.
ಮುಳಬಾಗಿಲು ತಾಲೂಕಿನಲ್ಲಿ ಕಪ್ಪಲಮಡಗೂ ಗ್ರಾಮದ ಬಳಿ ಮಾತನಾಡಿದ ಶಿವಕುಮಾರ್.. ನಾವು ಯಾವುದೇ ರಾಜಕೀಯ ವಿಚಾರವನ್ನು ಸುದೀಪ್ ಬಳಿ ಚರ್ಚೆ ಮಾಡಿಲ್ಲ. ಚಿತ್ರರಂಗದ ಸಮಸ್ಯೆ ಕುರಿತು ಪ್ರಣಾಳಿಕೆ ಮಾಡಲು ಚರ್ಚೆ ಮಾಡಿದ್ದೇವೆ. ಅಂಬರಿಷ್, ಪುನೀತ್, ವಿಷ್ಣುವರ್ಧನ್ ರೀತಿ ಸುದೀಪ್ ಉತ್ತಮ ನಾಯಕ ನಟ. ಕಾಂಗ್ರೆಸ್ ಪರ ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ ಎಂದಿದ್ದಾರೆ.

ನಾನು ರಾಜಕೀಯಕ್ಕೆ ಆಹ್ವಾನ ನೀಡಿಲ್ಲ, ಅನೇಕ ವಿಚಾರವಾಗಿ ಸಲಹೆ ಪಡೆಯಲು ಭೇಟಿ ಮಾಡಿದ್ದೇನೆ. ಕೊರೊನಾ ವೇಳೆಯಲ್ಲಿ ಚಿತ್ರರಂಗದ ಸಹಾಯಕ್ಕೆ ಸರ್ಕಾರ ಬಂದಿಲ್ಲ. ಕಾಂಗ್ರೆಸ್‌ಗೆ ಬನ್ನಿ ಎಂದು ನಾನು ಕರೆದಿಲ್ಲ. ಮೊದಲಿನಿಂದಲೂ ಅವರು ನಮ್ಮ ಖಾಸಗಿ ಕಾರ್ಯಕ್ರಮಕ್ಕೆ ಬರ್ತಿದ್ದಾರೆ, ಒಳ್ಳೆ ಸ್ನೇಹಿತ ಎಂದು ಸ್ಪಷ್ಟನೆ ನೀಡಿದ್ದಾರೆ.