Wednesday, January 22, 2025
ಸುದ್ದಿ

ನದಿಗೆ ಉರುಳಿ ಬಿದ್ದ ಆಟೊ ರಿಕ್ಷಾ: ಮಹಿಳೆ ಮೃತ್ಯು –ಕಹಳೆ ನ್ಯೂಸ್

ಆಟೊ ರಿಕ್ಷಾವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ 11 ಗಂಟೆಗೆ ಮುಂಡಾಜೆಯಿAದ ಕಕ್ಕಿಂಜೆ ಕಡೆಗೆ ಹೋಗುತ್ತಿದ್ದ ರಿಕ್ಷಾ, ಕಾಪು ಚಡಾವು ಹತ್ತಿರ ಚಾಲಕನ ನಿಯಂತ್ರಣ ಕಳೆದು ಕೊಂಡು ಮೃತ್ಯುಂಜಯ ನದಿಗೆ ಉರುಳಿ ಬಿದ್ದಿದೆ. ಕಿಂಡಿ ಅಣೆಕಟ್ಟುಗಳಲ್ಲಿ ನೀರು ನಿಂತಿರುವುದರಿAದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತು.್ತ ರಿಕ್ಷಾದಲ್ಲಿದ್ದ ಸಫಿಯಾ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಈ ವೇಳೆಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ರಿಕ್ಷಾದಲ್ಲಿದ್ದ ಇತರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.