Thursday, January 23, 2025
ಸುದ್ದಿ

ಸೂರ್ಯಕಾಂತಿ ಎಷ್ಟು ಆಕರ್ಷಕವಾಗಿದಿಯೋ, ಅಷ್ಟೇ ಆರೋಗ್ಯ ಸಮಸ್ಯೆಗೆ ರಾಮಬಾಣ : ಅದು ಹೇಗೆ ಅಂತಿರಾ..? ನೀವೇ ನೋಡಿ ..–ಕಹಳೆ ನ್ಯೂಸ್

ಸೂರ್ಯಕಾಂತಿ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಸೂರ್ಯಕಾಂತಿ ಹೂವು ನೋಡಲು ಎಷ್ಟು ಆಕರ್ಷಕವಾಗಿದಿಯೋ ಅಷ್ಟೇ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಇದು ಸೂರ್ಯನ ಬೆಳಕಿಗೆ ಅನುಗುಣವಾಗಿ ತನ್ನ ದಿಕ್ಕನ್ನು ಬದಲಾಯಿಸುತ್ತಲೇ ಇರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೂರ್ಯಕಾಂತಿ ಬೀಜಗಳು ಔಷಧೀಯ ಗುಣಗಳಿಂದ ತುಂಬಿವೆ, ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಈ ಬೀಜಗಳು ಪ್ರೋಟೀನ್, ಕ್ಯಾಲ್ಸಿಯಂನAತಹ ಅಂಶಗಳಲ್ಲಿ ಸಮೃದ್ಧವಾಗಿವೆ. ಅಷ್ಟೇಯಲ್ಲದೇ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಇಂದಿನ ದಿನಗಳಲ್ಲಿ ಹೃದಯ ಸಂಬAಧಿ ಕಾಯಿಲೆಗಳ ಅಪಾಯ ಹೆಚ್ಚಾಗಿದೆ. ಸೂರ್ಯಕಾಂತಿ ಬೀಜಗಳಲ್ಲಿ ಮೊನೊಸಾಚುರೇಟೆಡ್ ಕೊಬ್ಬು ಕಂಡುಬರುತ್ತದೆ, ಇದು ಹೃದಯಕ್ಕೆ ಪ್ರಯೋಜನಕಾರಿಯಾಗಿದೆ. ಈ ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ಪಾರ್ಶ್ವವಾಯು ಅಪಾಯವನ್ನು ತಪ್ಪಿಸಬಹುದು.

ಇನ್ನೂ ಈ ಸೂರ್ಯಕಾಂತಿ ಬೀಜ ಜೀರ್ಣಕ್ರಿಯೆಯನ್ನು ಉತ್ತಮವಾಗಿರಿಸುತ್ತದೆ. ಸೂರ್ಯಕಾಂತಿ ಬೀಜಗಳಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಕಂಡುಬರುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬAಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. 3. ಮೂಳೆಗಳಿಗೆ ಪ್ರಯೋಜನಕಾರಿ ಮೆಗ್ನೀಷಿಯಂ, ವಿಟಮಿನ್-ಇ ಮತ್ತು ಅನೇಕ ಪೋಷಕಾಂಶಗಳು ಈ ಬೀಜಗಳಲ್ಲಿ ಕಂಡುಬರುತ್ತವೆ, ಇದು ಮೂಳೆಗಳನ್ನು ಆರೋಗ್ಯಕರವಾಗಿರಿಸುತ್ತದೆ.

ಸೂರ್ಯಕಾಂತಿ ಬೀಜಗಳು ಒತ್ತಡವನ್ನು ಕಡಿಮೆ ಮಾಡಿ, ಮನಸ್ಸನ್ನು ಶಾಂತವಾಗಿಡಲು ಸಹಕಾರಿಯಾಗುತ್ತದೆ. ಇದರಲ್ಲಿರುವ ಮೆಗ್ನೀಸಿಯಮ್ ಮೆದುಳಿಗೆ ಪ್ರಯೋಜನಕಾರಿಯಾಗಿದೆ. ಇನ್ನೂ ಸಂಧಿವಾತ ಸಮಸ್ಯೆಗಳನ್ನು ಹೊಂದಿರುವ ಜನರಿಗೆ ಸೂರ್ಯಕಾಂತಿ ಎಣ್ಣೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಈ ಎಣ್ಣೆಯ ಬಳಕೆಯು ಸಂಧಿವಾತದ ಸಮಸ್ಯೆಗೆ ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ ವಿಟಮಿನ್-ಸಿ, ವಿಟಮಿನ್-ಇ ಮತ್ತು ಆಂಟಿ-ಆಕ್ಸಿಡೆAಟ್ ಗುಣಲಕ್ಷಣಗಳು ಸೂರ್ಯಕಾಂತಿ ಬೀಜಗಳಲ್ಲಿ ಕಂಡುಬರುತ್ತವೆ, ಇದು ಅಧಿಕ ರಕ್ತದೊತ್ತಡ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಅವರು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಸೂರ್ಯಕಾಂತಿಯ ಎಲ್ಲ ಭಾಗಗಳು ಆರೋಗ್ಯ ವೃದ್ಧಿಗೆ ಪರಿಣಾಮಕಾರಿಯಾಗಿದೆ.