Friday, January 24, 2025
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದೀಪ ಪ್ರದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಬಿ. ವಿ. ಸೂರ್ಯನಾರಾಯಣ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ದೀಪ ಪ್ರದಾನ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಗೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಉತ್ತಮ ಅಂಕಗಳನ್ನು ರ‍್ಯಾಂಕ್‌ಗಳನ್ನು ಗಳಿಸಲು ವಿದ್ಯಾರ್ಥಿಗಳು ಸತತ ಪರಿಶ್ರಮ ಅತ್ಯಗತ್ಯ. ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಬೇಕು. ನಮ್ಮ ಭವಿಷ್ಯವನ್ನು ನಾವೇ ನಿರ್ಧರಿಸಬೇಕು. ಕಷ್ಟಗಳು ಬಂದಾಗ ಎದೆಗುಂದದೆ ಪ್ರಯತ್ನವನ್ನು ನಿರಂತರವಾಗಿ ಮುಂದುವರಿಸಿದಾಗ ತಮ್ಮ ಗುರಿಯನ್ನು ಸಾಧಿಸಲು ಸಾಧ್ಯ.

ಪಂಚೇAದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊAಡು ಉತ್ತಮ ಗುರಿಯ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು. ಪಠ್ಯವನ್ನು ಮೀರಿದ ಜೀವನ ಪಾಠವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಇಚ್ಛಾಶಕ್ತಿ, ಆತ್ಮಸ್ಥೆöÊರ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯೆ, ವಿನಯ, ರಾಷ್ಟçಪ್ರಜ್ಞೆಗಳನ್ನು ಮೈಗೂಡಿಸಿಕೊಂಡು ಸಮಾಜವು ಗುರುತಿಸುವಂಥ ಕಾರ್ಯಗಳನ್ನು ಕೈಗೊಳ್ಳಬೇಕು. ಕಾಲೇಜಿನಲ್ಲಿ ಕಲಿತ ಪ್ರತಿಭಾನ್ವಿತ ಕುಡಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನತನದ ಛಾಪು ಒತ್ತುವುದರೊಂದಿಗೆ ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಬದಲಾಗುತ್ತಿರುವ ಜಗತ್ತಿನ ವೇಗಕ್ಕೆ ಸರಿಯಾಗಿ ನಾವು ಬದಲಾಗದಿದ್ದರೆ ಬದಲಾವಣೆಗಳು ನಮ್ಮನ್ನು ಬದಲಾಯಿಸಿಬಿಡುತ್ತದೆ.

ಕಾಲೇಜಿನಲ್ಲಿ ಕಲಿತ ವಿದ್ಯಾಲಯದ ಚಿಂತನೆಯನ್ನು ದೈನಂದಿನ ಬದುಕಿನಲ್ಲಿ ಅನುಷ್ಠಾನಗೊಳಿಸಬೇಕು. ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ, ರಾಷ್ಟçಪ್ರಜ್ಞೆ ಎಲ್ಲರದಾಗಬೇಕು. ಈ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಗುರುಹಿರಿಯರನ್ನು ಗೌರವಿಸಿ ಅವರ ಚಿಂತನೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.
ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ವಿಚಾರಗಳು, ಬೆಳೆಸಿಕೊಳ್ಳುವ ಮೌಲ್ಯಗಳು, ಪಡೆಯುವ ವಿದ್ಯೆ ಎಲ್ಲವೂ ಮುಂದಿನ ಬಾಳಿನಲ್ಲಿ ದಾರಿದೀಪವಾಗುವುದು. ತಮ್ಮ ಯಶಸ್ಸಿಗೆ ಕಾರಣರಾದ ವ್ಯಕ್ತಿಗಳನ್ನು ನಾವು ಎಂದೂ ಮರೆಯಬಾರದು. ಶಿಕ್ಷಣದ ಎಲ್ಲ ಆಯಾಮಗಳನ್ನು ಗ್ರಹಿಸುವ ಸಾಮರ್ಥ್ಯವನ್ನು ಪಡೆಯಬೇಕು. ಜೀವನದ ಗುರಿಯನ್ನು ತಲುಪುವಲ್ಲಿ ಸಾಕಷ್ಟು ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿನ ದೌರ್ಬಲ್ಯದಿಂದ ಹೊರಬಂದು ಭಾವನಾತ್ಮಕ ಸ್ಥಿರತೆಯನ್ನು ಗಟ್ಟಿ ಮಾಡಿಕೊಂಡಾಗ ನಮ್ಮಲ್ಲಿನ ಶಕ್ತಿಯು ಹೊರಹೊಮ್ಮಲು ಸಾಧ್ಯವಾಗುತ್ತದೆ. ಯಾವುದೇ ಕ್ಷೇತ್ರವಾದರೂ ಅದನ್ನು ಆರಿಸಿ ಸಾಧನೆ ಮಾಡುತ್ತಾ ಮುಂದುವರೆಯಬೇಕು, ಜೊತೆಗೆ ತಾನುಕಲಿತ ಸಂಸ್ಥೆಯನ್ನು, ಕಲಿಸಿದ ಗುರುಗಳನ್ನು ಗೌರವಿಸುವಂತಾಗಬೇಕು. ಜೀವನದಲ್ಲಿ ನಂಬಿಕೆ, ನಮ್ರತೆ ಮತ್ತು ವಿನಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ದೀಪ ಪ್ರದಾನ ಕಾರ್ಯಕ್ರಮ:
ಕಾರ್ಯಕ್ರಮದಲ್ಲಿ ಜ್ಞಾನಸ್ವರೂಪಿಯಾದ ದೀಪವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಕಿರಿಯ ವಿದ್ಯಾರ್ಥಿಗಳು ಮುನ್ನಡೆಯಬೇಕೆಂಬುದು ಈ ಕಾರ್ಯಕ್ರಮದ ಆಶಯವಾಗಿತ್ತು. ಬಳಿಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾಲೇಜಿನ ಉಪನ್ಯಾಸಕರಾದ ಹರೀಶ ಶಾಸ್ತಿçà ಮತ್ತು ಶ್ರೀಧರ ಶೆಟ್ಟಿಗಾರ್ ತಮ್ಮ ಹಿತನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬಳಿಕ 2022-23 ನೇ ಸಾಲಿನಲ್ಲಿ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಕನ್ನಡ ಸಂಘದ ವತಿಯಿಂದ ಆಯೋಜಿಸಿದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ- ರಕ್ಷಕ ಸಂಘದ ಸದಸ್ಯೆ ವಿದ್ಯಾಲಕ್ಷಿö್ಮÃ ಕೆ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುದತ್ ನಾಯಕ್ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕಿ ದಯಾಮಣಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಶರ್ಮಿಳಾ ಕಾರ್ಯಕ್ರಮವನ್ನು ನಿರೂಪಿಸಿ ನಳಿನಾ ಕುಮಾರಿ ವಂದಿಸಿದರು.

ಯಕ್ಷ- ದೃಶ್ಯ ತಾಳೆಮದ್ದಳೆ:
ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ರೂಪುಗೊಳ್ಳಲು ಕಲಿತ ಸಂಸ್ಥೆ, ಪೋಷಣೆ ನೀಡಿದ ಪೋಷಕರು, ಮಾರ್ಗದರ್ಶನ ನೀಡಿದ ಗುರುಗಳ ತ್ಯಾಗ ಇದೆ. ಇದನ್ನು ವಿದ್ಯಾರ್ಥಿಗಳಿಗೆ ನೆನಪಿಸಿ ಜೀವನದಲ್ಲಿ ನೈತಿಕತೆಯನ್ನು ರೂಪಿಸಿಕೊಳ್ಳಲು ಅಭಿನಂದನೆಯ ಜೊತೆ ಮಾರ್ಗದರ್ಶನವನ್ನು ಯಕ್ಷಗಾನದ ಹಾಡಿನ ಮೂಲಕ ಪ್ರಸ್ತುತ ಪಡಿಸಲಾಯಿತು. ಹಿಮ್ಮೇಳದಲ್ಲಿ ವಿದ್ಯಾರ್ಥಿಗಳಾದ ಶ್ರೇಯಾ ಭಾಗವತಿಕೆಯಲ್ಲಿ, ಚೆಂಡೆಯಲ್ಲಿ ಮಧುಸೂಧನ ಪ್ರಭು, ಮದ್ದಳೆಯಲ್ಲಿ ಯತಿನ್ ಮತ್ತು ಚಕ್ರತಾಳದಲ್ಲಿ ಆದಿತ್ಯನಾರಾಯಣ ಸಹಕರಿಸಿದರು. ಅರ್ಥಗಾರಿಕೆಯಲ್ಲಿ ದೇವೇಂದ್ರನಾಗಿ ಸನ್ಮಯ ಐ.ಕೆ, ಅಗ್ನಿಯಾಗಿ ಯತಿಕಾ, ವಾಯುವಾಗಿ ಶರ್ವಾಣಿ, ಬೃಹಸ್ಪತಿಯಾಗಿ ಭಾರ್ಗವಿ, ದೇವದೂತನಾಗಿ ಸ್ವಸ್ತಿಕ್ ಶರ್ಮ, ಕ್ರೌರ್ಯದಂತನಾಗಿ ಅವನೇಶ, ವಿಕಾಸುರನಾಗಿ ಪರೀಕ್ಷಿತ್, ವಿಕೃತಾಸುರನಾಗಿ ಅಮೋಘಶಂಕರ ಸಹಕರಿಸಿದರು. ತಂತ್ರಜ್ಞಾನದಲ್ಲಿ ಸಚಿನ್ ಉಪ್ಪಾರ್ಣ ಸಹಕರಿಸಿದರು.