Thursday, January 23, 2025
ಸುದ್ದಿ

ನಗರದ ಶ್ರೀ ಭುವನೇಂದ್ರ ಸಭಾ ಭವನದಲ್ಲಿ ನಡೆದ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯನಿರ್ವಹಣಾ ಸಭೆ –ಕಹಳೆ ನ್ಯೂಸ್

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯ ನಿರ್ವಹಣಾ ತಂಡದ ಸಭೆ ಡೊಂಗರಕೇರಿ ಶ್ರೀ ಭುವನೇಂದ್ರ ಸಭಾ ಭವನದಲ್ಲಿ ಮಂಡಲದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ್ ಕುಮಾರ್ ಶೆಟ್ಟಿ ಅವರ ವಹಿಸಿದ್ದರು. ಇನ್ನೂ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ ಅವರು ಇದೇ ತಿಂಗಳ 11ರಂದು ಮಂಗಳೂರಿಗೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸುತ್ತಿರುವ ಸಂದರ್ಭ ಅದ್ದೂರಿಯಾಗಿ ರೋಡ್ ಶೋ ನಡೆಯಲಿದೆ.ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪ್ರತಿ ಒಂದು ಬೂತ್ ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ರೋಡ್ ಶೋ ನಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲ ಪ್ರಭಾರಿ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಪಕ್ಷದ ಸಂಘಟನಾತ್ಮಕ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಮೂಡ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಬೆಳಕು ಚೆಲ್ಲಿದರು. ಮಂಡಲ ಅಧ್ಯಕ್ಷರಾದ ಶ್ರಿ ವಿಜಯ ಕುಮಾರ್ ಶೆಟ್ಟಿ ಅವರು ಮಾತನಾಡಿ ಪಕ್ಷದ ವತಿಯಿಂದ ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿ ನಡೆಸಿದ್ದಕ್ಕೆ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸಿದರು.

ಪದವು ಸೆಂಟ್ರಲ್ ವಾರ್ಡಿನಲ್ಲಿ ವಾರ್ಡ್ ಸಮಾವೇಶವು ಯಶಸ್ವಿಯಾಗಿ ನಡೆದಿದ್ದು ಮುಂದಿನ ದಿನಗಳಲ್ಲಿ ಎಲ್ಲ ವಾರ್ಡ್ ಗಳಲ್ಲಿ ವಾರ್ಡ್ ಸಮಾವೇಶ ನಡೆಸುವ ಮೂಲಕ ರಾಜ್ಯ ಸರ್ಕಾರ ಹಾಗೂ ಶಾಸಕರ ಅಭಿವೃದ್ಧಿ ಕೆಲಸಗಳನ್ನು ಪ್ರತಿಯೊಬ್ಬ ಮತದಾರನಿಗೂ ತಲುಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್ ,ಮ ನ ಪಾ ಉಪ ಮಹಾಪೌರರಾದ ಶ್ರೀಮತಿ ಪೂರ್ಣಿಮಾ ಎಂ , ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು , ಕಿರಣ್ ರೈ , ಶ್ರೀಮತಿ ಮೀರಾ ಕರ್ಕೇರ ,ಮಂಡಲದ ಪದಾಧಿಕಾರಿಗಳು , ಮಂಡಲ ಸಮಿತಿ ಸದಸ್ಯರು ,ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮ ನ ಪಾ ಸದಸ್ಯರು ,ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ,ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು ಹಾಗೂ ಸಹ ಸಂಚಾಲಕರು , ಶಕ್ತಿ ಕೇಂದ್ರ ಪ್ರಭಾರಿಗಳು ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಂಡಲ ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ ಸ್ವಾಗತಿಸಿ , ದೀಪಕ್ ಪೈ ಧನ್ಯವಾದ ಸಮರ್ಪಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸುರೇಂದ್ರ ಜೆ ಹಾಗೂ ಶ್ರೀಮತಿ ರೂಪ ಡಿ ಬಂಗೇರ ಕಾರ್ಯಕ್ರಮ ನಿರೂಪಿಸಿದರು.