Thursday, January 23, 2025
ಸುದ್ದಿ

ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರಿಗೆ ಕಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರೊಂದಿಗೆ ಗಲಾಟೆ ಮಾಡಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ನಿವಾಸಿ ರಾಜೇಶ್ ಬಂಧಿತ ಆರೋಪಿ. ರಾಜೇಶ್ ಅವರು 2014ರ ಅ.13ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಕರ್ತವ್ಯದಲ್ಲಿದ್ದ ಸುಬ್ಬ ಪಾಟಾಳಿ ಎಂಬವರೊಂದಿಗೆ ಗಲಾಟೆ ಮಾಡಿ ಕಚ್ಚಿದ್ದರು. ಆರೋಪಿ ರಾಜೇಶ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದಾಗಿ ಆರೋಪಿ ರಾಜೇಶ್ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಫೆ.6ರಂದು ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.