Thursday, January 23, 2025
ಸುದ್ದಿ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ರಾಗಿ ಸಂತೋಷ್ ಶೆಟ್ಟಿ ನೇಮಕ –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸಂತೋಷ್ ಶೆಟ್ಟಿ ಅವರು ಫೆ. 4 ರಂದು ಶನಿವಾರ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಅಂಕೋಲದಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ಧು ಚುನಾವಣೆಯ ಹಿನ್ನೆಲೆಯಲ್ಲಿ ಇವರನ್ನು ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಕಾರವಾರ, ಕುಮಟಾ ಹಾಗೂ ಅಂಕೋಲದಲ್ಲಿ ಇವರ ಕರ್ತವ್ಯ ನಿರ್ವಹಿಸಿದ ಅನುಭವಿಯಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ ಖಡಕ್ ಪೋಲೀಸ್ ಅಧಿಕಾರಿ ಟಿ.ಡಿ.ನಾಗರಾಜ್ ಅವರ ವರ್ಗಾವಣೆ ಬಳಿಕ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಕುರ್ಚಿ ಖಾಲಿಯಾಗಿತ್ತು.

‌ ಇದೀಗ ಚುನಾವಣೆಯ ವಿಚಾರದಲ್ಲಿ ಸಂತೋಷ್ ಶೆಟ್ಟಿ ಅವರನ್ನು ಅಂಕೋಲ ವೃತ್ತದಿಂದ ಬಂಟ್ವಾಳಕ್ಕೆ ವರ್ಗಾವಣೆ ಮಾಡಿದೆ.