Thursday, January 23, 2025
ಸುದ್ದಿ

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ದೆ –ಕಹಳೆ ನ್ಯೂಸ್

ವೃದ್ದೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಡೇಶಿವಾಲಯ ಎಂಬಲ್ಲಿ ನಡೆದಿದೆ.
ಕಡೇಶಿವಾಲಯ ಗ್ರಾಮದ ಗುಜುರುಕ್ಕು ನಿವಾಸಿ ಚೋಮು ,(63) ಮೃತ ಮಹಿಳೆಯಾಗಿದ್ದಾರೆ. ಇವರು ಆಸ್ತಮಾ ರೋಗದಿಂದ ಬಳಲುತ್ತಿದ್ದು, ಅಸ್ತಮಾ ಉಲ್ಬಣಗೊಂಡಾಗ ಸಹಿಸಲು ಆಗುವುದಿಲ್ಲ ಸಾಯುತ್ತೇನೆ ಎಂದು ಅನೇಕ ಬಾರಿ ನೆರೆಮನೆಯವರಲ್ಲಿ ಹಾಗೂ ಸಂಬAಧಿಕರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಆತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಉದಯರವಿ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು