Tuesday, January 21, 2025
ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ನಿಧನ -ಕಹಳೆ ನ್ಯೂಸ್

ಕಾಪು : ಕಳೆದ ಶನಿವಾರ ನಡೆದಿದ್ದ ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲಿಪುವಿನ ನಿವಾಸಿ ಪ್ರೀತೇಶ್‌ ಪೂಜಾರಿ ಅವರು ಅಪಘಾತ ದಲ್ಲಿ ಗಂಭೀರ ಗಾಯಗೊಂಡು ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಾವು ಛಾಯಾಗ್ರಾಹಕ ಸಂಘದ ಅಧ್ಯಕ್ಷ ವಿನೋದ್ ಕಾಂಚನ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಪು ಛಾಯಾಗ್ರಹಕ ಸಂಘದ ಸದಸ್ಯರಾಗಿದ್ದ ಪ್ರೀತೇಶ್ ಪೂಜಾರಿ ಅವರು ವಿವಿಧ ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿದ್ದರು.