Friday, November 22, 2024
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕೇಸರಿ ಭದ್ರಕೋಟೆಗೆ ಚಾಣಕ್ಯ ; ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆ..!ಪುತ್ತೂರಿನಲ್ಲಿ ಅಮಿತ್ ಶಾ ಚುನಾವಣಾ ರಣತಂತ್ರ –  ಕಹಳೆ ನ್ಯೂಸ್

ಪುತ್ತೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಪುತ್ತೂರಿನ ವಿವೇಕಾನಂದ ಪ್ರೌಢಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಮಾವೇಶಕ್ಕೆ 70 ಸಾವಿರದಿಂದ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಸುತ್ತಲಿನ ನಾಲ್ಕು ಶಾಸಕರಿಗೆ ಇದರ ಜವಾಬ್ದಾರಿಯನ್ನು ನೀಡಲಾಗಿದೆ. ಪೆಂಡಾಲ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯ ರೈತರು, ಸಹಕಾರಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಮಾವೇಶ ನಡೆಯುವ ಸ್ಥಳದ‌ ಸಿದ್ದತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್ ಸೇರಿದಂತೆ ಬಿಜೆಪಿ ಪ್ರಮುಖರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲಕ್ಕೆ ಭೇಟಿ ನೀಡಿ ಅಲ್ಲಿ ಭಾರತಾ ಮಾತ ಮಂದಿರ ಉದ್ಘಾಟನೆ ಹಾಗೂ ಹನುಮಗಿರಿ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:40 ಕ್ಕೆ ಸಮಾವೇಶ ಸ್ಥಳಕ್ಕೆ ಅಮಿತ್ ಶಾ ಆಗಮಿಸಿ ಮಾತನಾಡಲಿದ್ದಾರೆ.

ವಿಮಾನ ನಿಲ್ದಾಣ ಪಕ್ಕದ ಶ್ರೀದೇವಿ ಕಾಲೇಜಿನಲ್ಲಿ ಮಂಗಳೂರು ಮತ್ತು ಶಿವಮೊಗ್ಗ ವಿಭಾಗದ ಪ್ರಮುಖರ ಸಭೆಯನ್ನು ಅಮಿತ್ ಶಾ ಮಾಡಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ವಿಮಾನ ನಿಲ್ದಾಣ ಪಕ್ಕದಲ್ಲಿ ಜನರು ಶಾ ಗೆ ಸ್ವಾಗತ ಕೋರಲಿದ್ದು ಚಿಕ್ಕದಾಗಿ ರೋಡ್ ಶೋ ನಡೆಯಲಿದೆ. ಇದಕ್ಕೆ ಬೇಕಾದ ಭದ್ರತೆಯನ್ನು ಎಸ್‌ಪಿಜಿ ಹಾಗೂ ರಾಜ್ಯ ಪೊಲೀಸರು ಕಲ್ಪಿಸಿದ್ದಾರೆ. ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯಲ್ಲೇ ಬೀಡು ಬಿಟ್ಟಿದ್ದು ಭದ್ರತೆಯ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಕಾರ್ಯಕ್ರಮವಾದರೂ ಜಿಲ್ಲಾ ಬಿಜೆಪಿ ಇದೊಂದು ಚುನಾವಣಾ ಪೂರ್ವ ತಯಾರಿ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಂಡಿದೆ.