Saturday, January 25, 2025
ಸುದ್ದಿ

ಕ್ಯಾಂಪ್ಕೋ ಸಂಸ್ಧೆಯ ಮುಂದಿನ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ – ಯಶಸ್ವಿಯಾಗಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ – ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಯಶಸ್ವಿಯಾಗಿ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕ್ಯಾಂಪ್ಕೋ ಸಂಸ್ಧೆಯ ಮುಂದಿನ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದ.ಕ.ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರೂ ಜೊತೆಗಿದ್ದರು. ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಹೊರಟು ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಅಮಿತ್ ಶಾ ಅವರು ಅಲ್ಲಿಂದ ಕಾರಲ್ಲಿ ರಸ್ತೆ ಮಾರ್ಗವಾಗಿ ಮುಕ್ರಂಪಾಡಿ-ಬೈಪಾಸ್ ರಸ್ತೆ ಮೂಲಕ ತೆಂಕಿಲಕ್ಕೆ ಆಗಮಿಸಿದರು. ಈ ಸಂದರ್ಭ ರಸ್ತೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಕರಾವಳಿ ಪುಣ್ಯ ಮಣ್ಣನ್ನ ಹೊಗಲಿದ್ದಾರೆ. ಇನ್ನು ನೀವು ಇಲ್ಲಿನ ಜನ ಬೆವರು ಸುರಿಸಿ ಅಡಿಕೆ ಬೆಳಿಸುತ್ತೀರ ನಾವು ಅಡಿಕೆ ತಿಂದು ಬೆವರು ಸುರಿಸುತ್ತೇವೆ ಎಂದು ಗುಜರಾತ್ ಹಾಗೂ ನಮ್ಮ ಕರಾವಳಿಗೆ ಇರುವ ಸಾಮ್ಯತೆ. ಕ್ಯಾಂಪ್ಕೊ ಸಂಸ್ತೆ ನಿಮ್ಮ ನಾಡಿನ ಉತ್ತಮ ಮಲ್ಟಿ ಸ್ಟೇಟ್ ಸಂಸ್ಥೆ ಎಂದು ಹಾದಿ ಹೊಗಳಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,ಮಾಜಿ ಸಿಎಂ ಬಿ.ಎಸ್ ಯಡಯೂರಪ್ಪ,ರಾಜ್ಯ ಗೃಹಸಚಿವ ಅಗರ ಜ್ಞಾನೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಬಂದರು ಮೀನುಗಾರಿಕೆ ಸಚಿವ ಎಸ್ ಅಂಗಾರ, ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗ, ವ್ಯವಸ್ಥಾಪಕ ನಿರ್ದೇಶಕ ಹೆಚ್.ಎಂ.ಕೃಷ್ಣಕುಮಾರ್ ಮತ್ತು ಆಡಳಿತ ಮಂಡಳಿ ನಿರ್ದೇಶಕರು, ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿವಿಧ ಜನಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಮಿತ್ ಶಾ ಭಾಷಣ ಕೇಳಲು ಬಿಜೆಪಿಯ ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.