Friday, January 24, 2025
ಸುದ್ದಿ

ರಾಮ ಜನ್ಮಭೂಮಿ ವಿವಾದದ ಕುರಿತು ಮಹತ್ವದ ತೀರ್ಪು ನೀಡಿದ ಮೂಡಬಿದಿರೆಯ ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಮೂರ್ತಿ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕ…!!– ಕಹಳೆ ನ್ಯೂಸ್

ವಿವಾದಾತ್ಮಕ ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕುರಿತು ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್ ಪೀಠದ ಮಾಜಿ ನ್ಯಾಯಮೂರ್ತಿ ಸೈಯಿದ್ ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಯೋಧ್ಯೆ ವಿವಾದ ಅಲ್ಲದೇ ತ್ರಿವಳಿ ತಲಾಖ್ ಹಾಗೂ ಡೆಮೊಲಿಷನ್ ಪ್ರಕರಣಗಳ ಕುರಿತು ತೀರ್ಪು ನೀಡಿದ್ದರು.

ಕಳೆದ ವರ್ಷ ಜನವರಿ 4ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಅಬ್ದುಲ್ ನಜೀರ್ ನಿವೃತ್ತರಾಗಿದ್ದರು. ಆಂಧ್ರಪ್ರದೇಶದಿಂದ ಬಿಸ್ವಾ ಭೂಷಣ್ ಹರಿಚಂದನ್ ಛತ್ತೀಸ್ ಗಢಕ್ಕೆ ರಾಜ್ಯಪಾಲರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಅಬ್ದುಲ್ ನಜೀರ್ ನೇಮಕಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದಲ್ಲಿ ಹುಟ್ಟಿದ ಎಸ್ ಅಬ್ದುಲ್ ನಾಜಿರ್, ಮಹಾವೀರ ಕಾಲೇಜಿನಲ್ಲಿ ಬಿಕಾಂ ಮತ್ತು ಎಸ್​ಡಿಎಂ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು. ನಂತರ ಕರ್ನಾಟಕ ಹೈಕೋರ್ಟ್ ವಕೀಲರಾಗಿ ನೇಮಕವಾದರು. 2003ರಲ್ಲಿ ಅದೇ ಹೈಕೋರ್ಟ್​ನಲ್ಲಿ ಹೆಚ್ಚುವರಿ ನ್ಯಾಯಾಧೀಶರು ಮತ್ತು ನಂತರ ಖಾಯಂ ನ್ಯಾಯಾಧೀಶರಾಗಿ ನೇಮಕವಾದರು.

2017ರ ಫೆಬ್ರುವರಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ವೇಳೆಯೇ 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗದೇ ನೇರವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾದ ಮೂರನೇ ಜಡ್ಜ್ ಅವರಾಗಿದ್ದಾರೆ.