Thursday, January 23, 2025
ಸುದ್ದಿ

ಮರ್ಧಾಳದಲ್ಲಿ ಕಾರು, ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ, ಮಗು ಸ್ಥಳದಲ್ಲೇ ಸಾವು : ಗಾಯಗೊಂಡವರು ಪುತ್ತೂರು ಆಸ್ಪತ್ರೆಗೆ ದಾಖಲು –ಕಹಳೆ ನ್ಯೂಸ್

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಮಗು ಸಾವನ್ನಪ್ಪಿದ ಘಟನೆ ಮರ್ಧಾಳ ಎಂಬಲ್ಲಿ ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಮಗು ಸಾವನ್ನಪ್ಪಿದೆ. ಇನ್ನೂ ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಲಿದೆ.