Thursday, January 23, 2025
ಬಂಟ್ವಾಳಸುದ್ದಿ

ಬೈಕ್ ಅಪಘಾತ – ನಿಶ್ಚಿತಾರ್ಥವಾಗಿದ್ದ ಯುವತಿ ಸ್ಥಳದಲ್ಲೇ ಸಾವು –ಕಹಳೆ ನ್ಯೂಸ್

ಉಡುಪಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಯುವತಿ ಮಂಗಳೂರಿನ ರೋಶ್ನಿ ಡಿಸೋಜ (27) ಎಂದು ಗುರುತಿಸಲಾಗಿದೆ.

ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚ್ಗೆ ಭೇಟಿ ನೀಡಿ ಮರಳಿ ಮನೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.

ಮೂಡುಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್‌ಗೆ ಡಿಕ್ಕಿ ಹೊಡೆದು ಬೈಕ್ ಉರುಳಿ ಬಿದ್ದಿದ್ದು, ಇದರಿಂದ ಬೈಕ್ ನಿಂದ ಎಸೆಯಲ್ಪಟ್ಟ ರೋಶ್ನಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ರೋಶ್ನಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾಗಿ ಕಾಪು ಪೊಲೀಸರು ತಿಳಿಸಿದ್ದಾರೆ.