Thursday, January 23, 2025
ಸುದ್ದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು : ಮೈಸೂರಿನ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಓಪನ್ ಟೂರ್ನಮೆಂಟ್ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರನಾಗಿರುವ ಪ್ರಥಮ ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎ.ಆರ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಾವು ರಾಜೇಶ್ ಮತ್ತು ಲೀಲಾವತಿ ದಂಪತಿ ಪುತ್ರನಾಗಿರುವ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಚೇತನ್ ಎನ್ ಆರ್ ಕಟಾ ವಿಭಾಗದಲ್ಲಿ ಪ್ರಥಮ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.