Saturday, November 23, 2024
ಸುದ್ದಿ

ಉಪ್ಪಿನಂಗಡಿಯ ಪವಿತ್ರ ನೇತ್ರಾವತಿ ನದಿಯಲ್ಲಿ ಇಂದು ವಾಜಪೇಯಿ ಅಸ್ಥಿ ವಿಸರ್ಜನೆ – ಕಹಳೆ ನ್ಯೂಸ್

ಉಪ್ಪಿನಂಗಡಿ, ಆ 25 : ಮಾಜಿ ಪ್ರಧಾನಿ ದಿ. ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮ ತುಂಬಿದ ಅಸ್ಥಿ ಕಳಶವನ್ನು ಇಂದು ಸಂಜೆ ಉಪ್ಪಿನಂಗಡಿಯ ಪವಿತ್ರ ನೇತ್ರಾವತಿ ನದಿಯಲ್ಲಿ ವಿಸರ್ಜನೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಪ್ರಧಾನಿ ವಾಜಪೇಯಿ ಅವರ ಅಸ್ಥಿಯನ್ನು ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದ್ದು, ಹರಿದ್ವಾರದ ನಂತರ ಚಿತಾಭಷ್ಮವನ್ನು ಗಂಗಾ, ಯಮುನಾ ಮತ್ತು ತಪತಿ ಸೇರಿದಂತೆ ಉತ್ತರ ಪ್ರದೇಶದ ಪವಿತ್ರ ನದಿಗಳಲ್ಲಿ ವಿಸರ್ಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿಯ ನೇತ್ರಾವತಿ ಸೇರಿದಂತೆ ವಾಜಪೇಯಿ ಅವರ ಚಿತಾ ಭಸ್ಮವನ್ನು ಕರ್ನಾಟಕ ರಾಜ್ಯದಲ್ಲಿಯೂ ಎಂಟು ನದಿಯಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ತಿಳಿದುಬಂದಿದೆ. ರಾಜ್ಯದ ಪ್ರಮುಖ ನದಿಗಳಾದ ಕಾವೇರಿ, ನೇತ್ರಾವತಿ, ಮಲಪ್ರಭಾ, ಕೃಷ್ಣಾ ಸೇರಿದಂತೆ ಇತರೆ ನದಿಗಳಲ್ಲಿ ವಿಸರ್ಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಬಿಜೆಪಿ ಮೂಲಗಳು ತಿಳಿಸಿದೆ.

ಭಾರತದ ಹತ್ತನೇ ಪ್ರಧಾನಿಯಾದ ಅಟಲ್​ ಬಿಹಾರಿ ವಾಜಪೇಯಿ ಅವರು ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಆ.16ರಂದು ತಮ್ಮ 93ನೇ ವಯಸ್ಸಿನಲ್ಲಿ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆ.17ರಂದು ರಾಷ್ಟ್ರ ರಾಜಧಾನಿಯಲ್ಲಿನ ಸ್ಮೃತಿ ಸ್ಥಳದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.