ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ನಿಡ್ಪಳ್ಳಿ ಮುರಳೀಕೃಷ್ಣ ಭಟ್ ರವರ ಅಂತ್ಯಕ್ರಿಯೆ – ನೂರಾರು ಕಾರ್ಯಕರ್ತರು, ಪಕ್ಷದ ಪ್ರಮುಖರಿಂದ ಅಂತಿಮ ದರ್ಶನ ; ಘಟನೆ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಓಡೋಡಿ ಬಂದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್
ಪುತ್ತೂರು: ಕಾರೊಂದು ಪಲ್ಟಿ ಹೊಡೆದ ಪರಿಣಾಮ ಸಹ ಪ್ರಯಾಣಿಕ ಮೃತಪಟ್ಟ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ.
ಪುತ್ತೂರಿನಿಂದ ಬೆಟ್ಟಂಪಾಡಿ ಕಡೆಗೆ ತೆರಳುವ ಕಾರು ಸಂಟ್ಯಾರ್ ಸಮೀಪ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಬಿಜೆಪಿ ಬೆಂಬಲಿತ ನಿಡ್ನಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಕೃಷ್ಣ ಭಟ್ ಎಂದು ಗುರುತಿಸಲಾಗಿದ್ದು, ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ ಎಂದು ವರದಿಯಾಗಿತ್ತು.
ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್,
ಶಶಿಕುಮಾರ್, ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್
ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಓಡೋಡಿ ಬಂದ ಶಾಸಕ ಸಂಜೀವ ಮಠಂದೂರು :
ತಮ್ಮ ಪಕ್ಷದ ಕಾರ್ಯಕರ್ತನ ದುರಂತ ಸಾವಿನ ಸುದ್ದಿ ಕೇಳುತ್ತಿದ್ದಂತೆ ಅಧಿವೇಶನದ ಸಲುವಾಗಿ ಬೆಂಗಳೂರಿನಲ್ಲಿ ಇದ್ದ ಶಾಸಕ ಸಂಜೀವ ಮಠಂದೂರು ಬೆಳಗ್ಗೆ ಪುತ್ತೂರಿಗೆ ಓಡೋಡಿ ಬಂದಿದ್ದಾರೆ. ಕಾರ್ಯಕರ್ತನ ಮನೆಗೂ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಮತ್ತೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಒಟ್ಟಿನಲ್ಲಿ ತಮ್ಮ ಕಾರ್ಯಕರ್ತ ದುರಂತ ಸಾವಿನ ಕುರಿತು ಶಾಸಕರ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಶಾಸಕ ಜೊತೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಜೊತೆಗಿದ್ದರು.
ಬಿಜೆಪಿ ಹಾಗೂ ಸಂಘಟನೆಯ ಪ್ರಮುಖರಿಂದ ಅಂತಿಮ ನಮನ :
ಬೆಳಿಗ್ಗೆ ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದ್ವಾರದ ಬಳಿಯಿಂದ ನೂರಾರು ವಾಹನಗಳ ಮೂಲಕ ಮೆರವಣಿಗೆಯಲ್ಲಿ ಪಾರ್ಥೀವ ಶರೀರವನ್ನು ಸಾಗಿಸಲಾಯಿತು. ನಿಡ್ಪಳ್ಳಿ ವಿಜಯನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಸಾಗಿ ಮುಂಡೂರು ಅವರ ಸ್ವಗೃಹಕ್ಕೆ ಕರೆದೊಯ್ಯಲಾಯಿತು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರ. ಕಾರ್ಯದರ್ಶಿ ನಿತೀಶ್ ಶಾಂತಿವನ, ನಗರ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಹಿಂದು ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ತಾ.ಪಂ. ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಿಡ್ನಳ್ಳಿ ಗ್ರಾ.ಪಂ. ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಸದಸ್ಯರುಗಳು, ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ ಡಿ., ಉಪಾಧ್ಯಕ್ಷ ವಿನೋದ್ ಕುಮಾರ್ ರೈ, ಸದಸ್ಯರುಗಳು, ಬಿಜೆಪಿ
ಬೆಟ್ಟಂಪಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಜಗನ್ನಾಥ ರೈ ಕೊಮ್ಮಂಡ,
ಪಾಣಾಜೆ ಶಕ್ತಿ ಕೇಂದ್ರ ಅಧ್ಯಕ್ಷ ಸದಾಶಿವ ರೈ ಸೂರಂಬೈಲು, ಹಿಂದು ಸಂಘಟನೆಗಳ ಪ್ರಮುಖರು ಸೇರಿದಂತೆ ನೂರಾರು ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.