Thursday, January 23, 2025
ಸುದ್ದಿ

ಬಂಟ್ವಾಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ – ಕಹಳೆ ನ್ಯೂಸ್

ಬಂಟ್ವಾಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೊನ್ನೊಡಿ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿ.ಮೂಡ ಗ್ರಾಮದ ಪೊನ್ನೊಡಿ ಎಂಬಲ್ಲಿ ಟಾಟ ಇಂಟ್ರಾ ವಾಹನೊಂದು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೊರ್ವನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ಪರಿಣಾಮ ರಸ್ತೆ ಬಿದ್ದ ವ್ಯಕ್ತಿಗೆ ಗಂಭೀರವಾಗಿ ಗಾಯವಾಗಿದ್ದು, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈತನ ವಿವರ ಲಭ್ಯವಾಗಿಲ್ಲ. ಈತನ ಬಗ್ಗೆ ಮಾಹಿತಿ ಸಿಕ್ಕಿಲ್ಲವಾದ್ದರಿಂದ ಸಂಬಂಧಪಟ್ಟ ವ್ಯಕ್ತಿಗಳು ಪೋಟೋ ನೋಡಿ ಗುರುತು ಪತ್ತೆ ಹಚ್ಚಿದರೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಬಹುದು, ಅಥವಾ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರನ್ನು‌ ಸಂಪರ್ಕ ಮಾಡುವಂತೆ ತಿಳಿಸಿದ್ದಾರೆ.