Saturday, November 23, 2024
ಸುದ್ದಿ

ಬೀಜಾಡಿ: ಆಂಬುಲೆನ್ಸ್, ಲಾರಿ, ಟಿಪ್ಪರ್ ನಡುವೆ ಸರಣಿ ಅಪಘಾತ : 3 ಮಂದಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೀಜಾಡಿ: ವಯೋವೃದ್ಧ ರೋಗಿಯನ್ನು ಆಂಬುಲೆನ್ಸ್ ನಲ್ಲಿ ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕೋಟೇಶ್ವರ ಸಮೀಪದ ಬೀಜಾಡಿಯ ಪೂಜಾ ಮಾರ್ಬಲ್ ಯೂಟನರ್ ತಿರುವಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್ ಹಾಗೂ ಲಾರಿ ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತಗೊಂಡು 3 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಟೇಶ್ವರ ಸಮೀಪದ ವಕ್ವಾಡಿಯಿಂದ ವಯೋವೃದ್ಧ ರೋಗಿಯನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಚಾಲಕ ಸರ್ವೀಸ್ ರಸ್ತೆಯಿಂದ ಹೆದ್ದಾರಿಯನ್ನು ಕ್ರಾಸ್ ಮಾಡುವ ವೇಳೆ, ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಲಾರಿಯು ಆಂಬುಲೆನ್ಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಆಂಬುಲೆನ್ಸ್ ತಿರುಗಿ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಟಿಪ್ಪರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಿಂದ ಆಂಬುಲೆನ್ಸ್ ನಲ್ಲಿ ಚಿಕಿತ್ಸೆಗೆಂದು ತೆರಳುತ್ತಿದ್ದ ವಕ್ವಾಡಿಯ ಸಿದ್ದಯ್ಯ ಹೆಗ್ಡೆ(87), ಕುಟುಂಬಿಕರಾದ ಉದಯ ಹೆಗ್ಡೆ(49), ಸುಶೀಲ ಶೆಟ್ಟಿ(65) ಇವರಿಗೆ ಗಂಭೀರ ಗಾಯಗಳಾಗಿದ್ದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅದೃಷ್ಟವಾಶತ್ ಆಂಬುಲೆನ್ಸ್ ಚಾಲಕ ಐಯೂಬ್ ಕೋಟೇಶ್ವರ ಯಾವುದೇ ಪ್ರಾಣಪಾಯವಿಲ್ಲದೇ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ದೃಶ್ಯಗಳನ್ನು ಪರಿಶೀಲಿಸಿ ಕ್ರಮ ಕೈಗೊಂಡರು.