Saturday, November 23, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.