Friday, January 24, 2025
ಸುದ್ದಿ

ರಾಷ್ಟ್ರ ಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಅನುರಾಗ್ ಜಿ. – ಕಹಳೆ ನ್ಯೂಸ್

ಉಡುಪಿ: ಪಾಟ್ನಾ — ಬಿಹಾರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಇಂಟರ್ ಜಿಲ್ಲಾ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಅಲೆವೂರು ಕೇಂದ್ರೀಯ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿಯಾದ ಅನುರಾಗ್ ಜಿ. ಅವರು ಗುಂಡು ಎಸೆತ ಸ್ಪರ್ಧೆಯ 16 ವರ್ಷ ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮುಡಿಗೇರಿಸಿ ಕೊಂಡಿದ್ದಾರೆ”

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಕಾರ್ಕಳ BSNL ಉದ್ಯೋಗಿ ಗುರುರಾಜ ಮತ್ತು ಉಡುಪಿ ಜಿಲ್ಲಾ ಅಸ್ಪತ್ರೆಯ ನರ್ಸಿಂಗ್ ಅಧಿಕಾರಿ ರಮಣಿ ದಂಪತಿಗಳ ಪುತ್ರ. ಇವರು ಅಂತರಾಷ್ಟ್ರೀಯ ಕ್ರೀಡಾಪಟು ಶಾಲಿನಿ ರಾಜೇಶ್ ಶೆಟ್ಟಿ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.