Thursday, January 23, 2025
ಸುದ್ದಿ

ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ಮೋದಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ : ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (85)ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕುಟುಂಬಸ್ಥರು, ಕಲಾವಿದರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

“ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚಿಕೊಳ್ಳಲಿದ್ದಾರೆ. ಅವರ ನಿಧನದಿಂದ ನಮಗೆ ತುಂಬಾ ನೋವು ಆಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.