Thursday, January 23, 2025
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗಾಗಿ ಹಿಂದಿನ ಸರ್ಕಾರಗಳು ಕೇವಲ 54,14 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ 261.53 ಕೋಟಿ ರೂ. ಗಳನ್ನು ಒದಗಿಸಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 50 ಕನಕದಾಸ ವಿದ್ಯಾರ್ಥಿ ನಿಲಯಗಳ ಸುಸಜ್ಜಿತ ಕಟ್ಟಡ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಈ ಸಂಬಂಧ ಘಟಕ ವೆಚ್ಚವನ್ನು 3.5 ಕೋಟಿ ರೂ. ಗಳಿಂದ 5 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.