Monday, January 20, 2025
ಬೆಂಗಳೂರುರಾಜ್ಯಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.ರೂಪ ವಿರುದ್ಧ ಲಿಖಿತ ದೂರು ನೀಡಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ದೂರು ನೀಡಿದ್ದೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರೋಹಿಣಿ ಸಿಂಧೂರಿ ಮಾತನಾಡುತ್ತಾ, ನಾನು ಸಮಾಜಿಕ ಜಾಲತಾಣದಲ್ಲಿ ಸಕ್ರೀ ಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂಬುದನ್ನು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ತಿಳಿಸಿದ್ದೇನೆ ಎಂದರು.

ಸರ್ಕಾರಿ ಅಧಿಕಾರಿಗಳು ‌ಮತ್ತು ನೌಕರರು ಮಾಧ್ಯಮದ ಮುಂದೆ ಮಾತನಾಡಬಾರದು ಎಂದು ಸರ್ಕ್ಯೂಲರ್ ಇದೆ. ಹೀಗಾಗಿ ನಾನು ಮಾಧ್ಯಮಗಳ ಮುಂದೆ ಬಂದು ಯಾವುದೇ ಹೇಳಿಕೆ ನೀಡಲ್ಲ. ನಾನು ಪುರುಷ ಐಎಎಸ್ ಅಧಿಕಾರಿಗಳಿಗೆ ಕೆಲ ಫೋಟೋಗಳನ್ನು ಕಳುಹಿಸಿದ್ದೇನೆ ಎಂದು ರೂಪ ಆರೋಪ ಮಾಡಿದ್ದಾರೆ. ಮೊದಲು ಆ ಮೂರು ಜನ ಅಧಿಕಾರಿಗಳು ಯಾರೆಂದು ಹೇಳಲಿ ಎಂದು ರೋಹಿಣಿ ಸಿಂಧೂರಿ ಸವಾಲೆಸೆದಿದ್ದಾರೆ.