ಬಂಟ್ವಾಳ ತಾಲೂಕಿಲ್ಲಿ ನಡೆಯುವ ಗ್ರಾಮಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪೋಲಿಸ್ ಇನ್ಸ್ ಪೆಕ್ಟರ್ ಸಂತೋಷ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಯೂತ್ ಕಮಿಟಿ ಸಭೆ ನಡೆಯಿತು.
ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ರುವ ಯುವಕರಿಗೆ ಚುನಾವಣೆಯ ಮಾಹಿತಿಯನ್ನು ಇವರು ನೀಡಿದರು.
ಜೊತೆಗೆ ಚುನಾವಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಗೆ ಯಾವುದೇ ತೊಡಕು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಲಾಯಿತು.
ಜೊತೆಗೆ ಅಯಾಯ ಗ್ರಾಮದಲ್ಲಿ ಯಾವುದೇ ಸಮಸ್ಯೆ ಗಳಾದರೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.
ಗ್ರಾಮಾಂತರ ಎಸ್.ಐ. ಉದಯರವಿ ಉಪಸ್ಥಿತರಿದ್ದರು.