ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಹಿಂದೂ ವಿದ್ಯಾರ್ಥಿಗಳನ್ನ ಕರೆಸಿಕೊಂಡು ಇಸ್ಲಾಂ ಮತ ಪ್ರವಚನ..! ಹಿಂದೂ ಕಾರ್ಯಕರ್ತರ ಆಕ್ರೋಶ –ಕಹಳೆ ನ್ಯೂಸ್
ವಿಟ್ಲ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ವಿದ್ಯಾರ್ಥಿಗಳನ್ನ ಕರೆಸಿಕೊಂಡು ಇಸ್ಲಾಂ ಮತ ಪ್ರವಚನ ಮಾಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಈ ಗ್ಗೆ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ವಿಟ್ಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಫೆ.೧೮ ರಂದು ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟಣೆಯೊAದರ ರಾಜಕಮಲ್ ಎಂಬ ಖಾಸಗಿ ಹಾಲ್‌ಗೆ ಜನತಾ ವಿದ್ಯಾಸಂಸ್ಥೆಯ ಮುಖ್ಯೋಪಾದ್ಯಯರಾದ ಟಿ ಆರ್ ನಾಯಕ್, ರಫೀಕ್ ಮಾಸ್ಟರ್ ಆತೂರ್ ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯಷನ್ ಸಂಘಟನಾಕಾರರು ಸದ್ರಿ ಶಾಲೆಯ ವಿಧ್ಯಾರ್ಥಿಗಳನ್ನು ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಕರೆಸಿಕೊಂಡು, ಕಾರ್ಯಾಗಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ವಿಟ್ಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.